Skip to main content

ಕನ್ನಡವೆಂದರೆ#ಬದುಕಿನ ಬಾಶೆ# kannada# language of life

 ಕನ್ನಡವೆಂದರೆ ಭುವನೇಶ್ವರಿಯೂ ಅಲ್ಲ

ಚಾಮುಂಡಿಯೂ ಅಲ್ಲ

ಕನ್ನಡವೆಂದರೆ ನಾಡಿನ ಬಹುಸಂಖ್ಯಾತ ಜನರ ಬದುಕಿನ ಬಾಶೆ


ನಾಡೆಂದರೆ ದೇವರಲ್ಲ

ನಾಡೆಂದರೆ ಜನಸಮುದಾಯಗಳ ಸಾಮೂಹಿಕ ಬದುಕಿನ ಬೀಡು

ಬದುಕಿನ ಹಾಡುಪಾಡು

ಬೆವರಿನ ಭೂಮಿ

ತ್ಯಾಗದ ಫಲ


ಕರ್ನಾಟಕವೆಂದರೆ ಮೈಸೂರು ಮಾತ್ರವಲ್ಲ 

ಬ್ರಾಹ್ಮಣಿಕೆಯ ಆಚರಣೆಗಳು ಬಹುಸಂಖ್ಯಾತ ನಾಡುನುಡಿಯ ಭಾಗವಲ್ಲ


ಬಾಶೆಯೆಂದು ದೇವರಾಗಬಾರದು.

ನಾಡೆಂದೂ ದೇವರಾಗಬಾರದು

ನಾಡುನುಡಿಯೆಂದೂ ಪೂಜಾಸ್ಥಾವರವಾಗಬಾರದು

ಪೂಜಾಸ್ಥಾವರವಾದರೆ ಅವುಗಳ ಸರ್ವನಾಶವೆಂದರ್ಥ


ಬಂಡಾಯವೆಂದರೆ ಪ್ರತಿಗಾಮಿ ಸಂಧಾನವಾಗಬಾರದು

ಅದು ಸ್ವಾರ್ಥವೆಂದರ್ಥ


ಬಂಡಾಯವೆಂದರೆ ಪುರೋಗಾಮಿ ಸಂಧಾನವಾಗಬಹುದು.

ಅದು ಸಾಮೂಹಿಕ ಹಿತವೆಂದರ್ಥ


೨೯/೦೮/೨೦೨೫.                                  - ನಂದಕುಮಾರ್ ಕುಂಬ್ರಿ ಉಬ್ಬು..

Comments

Popular posts from this blog

ಒಂದು ಹಳ್ಳಿಯ ಕತೆ#village#story#shimoga#karnataka

  ಒಂದು ಹಳ್ಳಿಯ ಕತೆ                                                                  -ನಂದಕುಮಾರ್‌ ಕುಂಬ್ರಿ ಉಬ್ಬು    nandakumarnandana67@gmail.com                       ಅದೊಂದು ಹಳ್ಳಿ, ಸುಮಾರು ಇಪ್ಪತ್ತೈದರಷ್ಟು ಕುಟುಂಬಗಳು ಅಲ್ಲಿ ವಾಸ ಮಾಡುತ್ತಿವೆ. ಕೆಲವು ಕುಟುಂಬಗಳು ಮುಳುಗಡೆ ಸಂತ್ರಸ್ತರಾಗಿದ್ದಾರೆ. ಆ ಹಳ್ಳಿಗೆ ನೂರಾರು ವರುಷಗಳ ಇತಿಹಾಸವಿದೆ. ಅಲ್ಲಿನವರ ಪ್ರಕಾರ ಆ ಹಳ್ಳಿಯ ಅದೀಕೃತ ಭೂದಾಖಲೆಯೇ ನೂರಮೂವತ್ತು ವರುಷಗಳ ಇತಿಹಾಸವನ್ನು ದಾಖಲು ಮಾಡುತ್ತದೆ. ಅಂದರೆ ಬ್ರಿಟೀಷರ ಆಡಳಿತಕ್ಕೂ ಮೊದಲಿನ ಕಾಲದಿಂದಲೂ ಈ ಹಳ್ಳಿಗೆ ಇತಿಹಾಸವಿರಬಹುದು. ಬ್ರಿಟೀಷರು ಹೋಗಿ ಈಗಾಗಲೇ ಎಪ್ಪತ್ತೈದು ವರುಷಗಳಾಗಿವೆಯಲ್ಲ. ಮಲೆನಾಡಿನ ಹಳ್ಳಿಯಾದ್ದರಿಂದ ವಿರಳ ಮನೆಗಳು, ಕಿ. ಮೀಗಳ ಅಂತರದ ಮನೆಗಳು ಸಹಜ ತಾನೇ. ಮೊದಲದು ಜೈನ ಸಮುದಾಯದವರ ಹಿಡಿತದಲ್ಲಿದ್ದ ಹಳ್ಳಿಯಾಗಿತ್ತು. ಅವರೇ ಅಲ್ಲಿನ ಭೂಮಾಲಿಕರಾಗಿದ್ದವರು. ಈ ಹಳ್ಳಿ ಶಿವಮೊಗ್ಗ ಹಾಗೂ ಉತ್ತರ ಕನ್ನಡದ ಗಡಿಬಾಗದಲ್ಲಿದೆ...

ಜನಪರ ಸಮಾಜೋರಾಜಕೀಯ ಕಾರ್ಯಕರ್ತಎಂ ಎನ್ ಸುಂದರ್ ರಾಜ್#sociopolitical activist M N Sundar Raj#Bidar

  ಜನಪರ  ಸಮಾಜೋ ರಾಜಕೀಯ ಕಾರ್ಯಕರ್ತ ಬೀದರಿನ ಎಂ ಎನ್ ಸುಂದರ್ ರಾಜ್.   ಎಂ ಎನ್ ಸುಂದರ್ ರಾಜ್   ಸಮಾಜದ ಬಗ್ಗೆ ನೈಜ ಕಾಳಜಿ, ಸಮಾಜದ ಆರೋಗ್ಯದ ಬಗೆಗಿನ ನೈಜ ಕಳಕಳಿ ಹಾಗೂ ದಲಿತ ದಮನಿತರ ಹಾಗೂ ಮಹಿಳೆಯರ ಬಗೆಗಿನ ನೈಜ ಕಾಳಜಿಯಿಂದ ಯಾವುದೇ ವೈಯಕ್ತಿಕ ಫಲಾಪೇಕ್ಷೆ ಇಲ್ಲದೇ ಮಿಡಿಯುವ ಹಾಗೂ ದುಡಿಯುವ ಬದ್ದ ಮನಸುಗಳು ವಿರಳ ಎನ್ನುವುದು ಸಾಮಾನ್ಯವಾಗಿ ಇರುವ ಅಭಿಪ್ರಾಯಗಳಾಗಿವೆ.   ಆದರೆ ಇದು ಸರಿಯಾದ ಅಭಿಪ್ರಾಯಗಳಲ್ಲ ಎನ್ನಲು ಕಳೆದ ತಿಂಗಳು ತಮ್ಮ ಕೊನೆಯುಸಿರು ಎಳೆದ ಕಾ. ಸುಂದರ್ ರಾಜ್ ಒಂದು ಉತ್ತಮ ಉದಾಹರಣೆಯಾಗಿದ್ದಾರೆ. ಜಲ್ ರಹಿ.. ಜಲ್ ರಹೀ ಯೆ ಜಿಂದಗೀ ದೌಡ್ ಕಾ ಮಶಾಲ್ ಹೇ…ಜಲ್ ರಹಾ ಯೇ ಆಸ್ ಮಾನ್ ಸದಾ ಲಾಲ್ ಲಾಲ್ ಹೇ …ಎಂಬುದು ಅವರು ಹಾಡುತ್ತಿದ್ದ ಕೆಲವೇ ಹಾಡುಗಳಲ್ಲಿ  ಒಂದು ಬಹಳ ಅರ್ಥಪೂರ್ಣವಾದ ಹಾಡಾಗಿತ್ತು. ಉರ್ದು ಹಾಗೂ ಹಿಂದಿ ಕವಿತೆಗಳು ಹಾಗೂ ಶಾಯಿರಿಗಳನ್ನು ಆಗಾಗ್ಗೆ ತಮ್ಮ ಮಾತುಗಳ ನಡುವೆ ತಮ್ಮದೇ ಗತ್ತಿನಲ್ಲಿ ಹೇಳುತ್ತಿದ್ದರು. ಆರು ಅಡಿ ಎತ್ತರದ ಅಜಾನುಬಾಹುವಾಗಿದ್ದ ಅವರು ಕುಸ್ತಿಪಟು ಕೂಡ ಆಗಿದ್ದವರು   ಇದೇ ಮಾರ್ಚ್ 9ರಂದು ಬೀದರ ನಗರದಲ್ಲಿ ಕಾ. ಸುಂದರ್ ರಾಜ್ ರಿಗೆ ಅವರ ಗೆಳೆಯರ ಬಳಗ ಹಾಗೂ ಭಗತ್ ಸಿಂಗ್ ಟ್ರಸ್ಟ್ ವತಿಯಿಂದ ಶ್ರದ್ದಾಂಜಲಿ ಹಾಗೂ ಸ್ಮರಣಸಬೆ ಆಯೋಜಿಸಲಾಗಿದೆ.   ಬೀದರ ಜಿಲ್ಲೆ ನಾಡಿನಲ್ಲಿ ಆದ ಪ್ರಜಾತಾಂತ್ರಿಕ ಬೆಳವಣಿಗೆಯ ಒಂದು ದೊಡ್ಡ...

ʼರಾಗಿ ತೆನೆʼ ಬುಡಕಟ್ಟು ಹೆಣ್ಣೊಬ್ಬಳ ಬಾಳಗಾಥೆ# Ragi thene# tribal woman's life story#kannada

  ʼರಾಗಿ ತೆನೆʼ ಬುಡಕಟ್ಟು ಹೆಣ್ಣೊಬ್ಬಳ ಬಾಳಗಾಥೆ ಒಂದು ಗಾಢ ಜೀವಿತಾನುಭವ ಕಥನ     “ಬಾಲ್ಯದಲ್ಲಿ ಕುರಿ ಮೇಯಿಸುವುದು, ದನ ಮೇಯಿಸುವುದು, ಸೌದೆ ತರುವುದು,ಕೂಲಿ ಕೆಲಸಕ್ಕೆ ಹೋಗುವುದು,ಸೇದುವ ಬಾವಿಯಿಂದ ನೀರು ಸೇದುವುದು. ಇವೇ ಮುಂತಾದ ಪಶುಪಾಲನೆಯ ಕಾಯಕ ಮಾಡುತ್ತಾ, ಕಾಡು ಮೇಡು ಅಲೆಯುತ್ತಾ, ಕಾರೆಕಾಯಿ, ಬಾರೆಕಾಯಿ, ಕೈಯಾರಿ ಕಾಡುಗೆಣಸು, ಬೆಲ್ಲದವರೆ ಸೊಪ್ಪು ಮುಂತಾದ ಕಂದಮೂಲಗಳನ್ನು ತಿಂದು ಹಳ್ಳದ ನೀರು ಕುಡಿಯುತ್ತಾ ಕಾಡುಹುಡುಗಿಯಾಗಿ ಬಾಲ್ಯವನ್ನು ದಾಟಿದಳಂತೆ, ಅವಳೇ ಹೇಳುತ್ತಿದ್ದ ಹಾಗೆ ಇಷ್ಟು ಕೆಲಸಕ್ಕೆ ವರುಷಕ್ಕೆ ಎರಡು ಲಂಗಗಳಷ್ಟೇ ಅವಳ ಪಾಲಿಗೆ ಸಂದಾಯವಾಗುತ್ತಿದ್ದ ಅಮೂಲ್ಯ ಕೊಡುಗೆಗಳು. ಅವಳ ಹುಟ್ಟಿನಿಂದ ನನ್ನ ಹುಟ್ಟಿನವರೆಗೂ ಮೆಟ್ಟಿನ ಸಂಗವಿರಲಿಲ್ಲ…. ಅಜ್ಜಿ ಮೃತಳಾದ ಸ್ವಲ್ಪ ದಿನಗಳಲ್ಲಿಯೇ ಮಕ್ಕಳಿಗೆ ಬೇಯಿಸಿ ಹಾಕುವವರಿಲ್ಲ ಎಂಬ ನೆಪ ಮುಂದೊಡ್ಡಿ ನಮ್ಮಜ್ಜ ಮತ್ತೊಬ್ಬಳನ್ನು ಮದುವೆ ಮಾಡಿಕೊಂಡು ಬಂದನಂತೆ ಅಷ್ಟರಲ್ಲಿಯೇ ನಮ್ಮ ಪಿತಾಮಹ ಅವನ ಪಿತಾಮಹನ ಚಿತಾವಣೆಯಿಂದ ಬಕ್ಕನ ಹೊಲದಲ್ಲಿ ಬಹಿರ್ದೆಸೆಗೆಂದು ಹೋಗುತ್ತಿದ್ದ ಅವ್ವನನ್ನು ತಡೆದು ʼಮುಟ್ಟಿಕೊಂಡೆ ಮುಟ್ಟಿಕೊಂಡೆʼ ಎಂದು ಮೂರು ಬಾರಿ ಕೂಗಿ ಕೈಹಿಡಿದನಂತೆ. ಹಟ್ಟಿಯಿಂದ ಹೊರಗೆ ಒಂಟಿಯಾಗಿ ಬರುವ ಬರುವ ಮೈನೆರೆದ ಹೆಣ್ಣು ಮಕ್ಕಳನ್ನು ಯಾವುದೇ ಗಂಡಸು ಮೂರುಬಾರಿ ʼಮುಟ್ಟಿಕೊಂಡೆ ಮುಟ್ಟಿಕೊಂಡೆʼ ಎಂದರೆ ಮುಗಿಯಿತು. ಮುಟ್ಟಿಕೊಂಡವರಿಗೂ ಮುಟ್ಟಿಸಿ...