Skip to main content

Posts

Showing posts from February, 2026

ಭ್ರಷ್ಟಾಚಾರ#ಆಡಳಿತ#ಸತ್ಯೋತ್ತರ#corruption#administration#post truth era

  ಭ್ರಷ್ಟಾಚಾರವೇ ಆಡಳಿತವೂ… ಸತ್ಯೋತ್ತರ ಕಾಲಘಟ್ಟವೂ…                                                                                   -ನಂದಕುಮಾರ್‌ ಕುಂಬ್ರಿ ಉಬ್ಬು         ಮಿಂಚಂಚೆ:  nandakumarnandana67@gmail.com ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಒಂದು ಭಾರಿ ಕಾರ್ಪೋರೇಟ್ ಇನ್ಫೋಸಿಸ್‌ ಹಾಗೂ ಈ ಹಿಂದೆ ಕರ್ನಾಟಕದಲ್ಲಿ ಕಾರ್ಯಾಚರಿಸಿದ್ದ ದೊಡ್ಡ ಎಲೆಕ್ಟ್ರಾನಿಕ್‌ ಕಂಪನಿಯಾದ ಬಿಪಿಎಲ್‌ ಗೆ ಕರ್ನಾಟಕ ಸರ್ಕಾರ ರಿಯಾಯಿತಿಯಲ್ಲಿ ಕೈಗಾರಿಕಾಭಿವೃದ್ದಿ ಹಾಗೂ ಉದ್ಯೋಗಾವಕಾಶಗಳ ನಿರ್ಮಾಣಕ್ಕಾಗಿ ನೀಡಿದ್ದ ಭೂಮಿಗಳನ್ನು ನಿಯಮ ಮೀರಿ ಮಾರುಕಟ್ಟೆ ದರದಲ್ಲಿ ಮಾರಿ ಭಾರಿ ಲಾಭ ಮಾಡಿಕೊಂಡಿದ್ದರ ವರದಿಗಳು ಇತ್ತೀಚೆಗೆ ಹೊರಬಂದವು. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿಯ ಇನ್ಫೋಸಿಸ್ ಕಂಪನಿಯು ಬೆಂಗಳೂರಿನ ಅತ್ತಿಬೆಲೆಯಲ್ಲಿನ ಐವತ್ಮೂರೂವರೆ ಏಕರೆಗಳ ಭೂಮಿಯನ್ನು ಇನ್ನೂರೈವತ್ತು ಕೋಟಿ ರೂಪಾಯಿಗಳಿಗೆ ರಿಯಲ್‌ ಎಸ್ಟೇಟ್‌ ಕ್ಷೇತ್ರದ ಭಾರಿ ಕುಳವಾದ ಪೂರ್ವಂಕ...

ʼರಾಗಿ ತೆನೆʼ ಬುಡಕಟ್ಟು ಹೆಣ್ಣೊಬ್ಬಳ ಬಾಳಗಾಥೆ# Ragi thene# tribal woman's life story#kannada

  ʼರಾಗಿ ತೆನೆʼ ಬುಡಕಟ್ಟು ಹೆಣ್ಣೊಬ್ಬಳ ಬಾಳಗಾಥೆ ಒಂದು ಗಾಢ ಜೀವಿತಾನುಭವ ಕಥನ     “ಬಾಲ್ಯದಲ್ಲಿ ಕುರಿ ಮೇಯಿಸುವುದು, ದನ ಮೇಯಿಸುವುದು, ಸೌದೆ ತರುವುದು,ಕೂಲಿ ಕೆಲಸಕ್ಕೆ ಹೋಗುವುದು,ಸೇದುವ ಬಾವಿಯಿಂದ ನೀರು ಸೇದುವುದು. ಇವೇ ಮುಂತಾದ ಪಶುಪಾಲನೆಯ ಕಾಯಕ ಮಾಡುತ್ತಾ, ಕಾಡು ಮೇಡು ಅಲೆಯುತ್ತಾ, ಕಾರೆಕಾಯಿ, ಬಾರೆಕಾಯಿ, ಕೈಯಾರಿ ಕಾಡುಗೆಣಸು, ಬೆಲ್ಲದವರೆ ಸೊಪ್ಪು ಮುಂತಾದ ಕಂದಮೂಲಗಳನ್ನು ತಿಂದು ಹಳ್ಳದ ನೀರು ಕುಡಿಯುತ್ತಾ ಕಾಡುಹುಡುಗಿಯಾಗಿ ಬಾಲ್ಯವನ್ನು ದಾಟಿದಳಂತೆ, ಅವಳೇ ಹೇಳುತ್ತಿದ್ದ ಹಾಗೆ ಇಷ್ಟು ಕೆಲಸಕ್ಕೆ ವರುಷಕ್ಕೆ ಎರಡು ಲಂಗಗಳಷ್ಟೇ ಅವಳ ಪಾಲಿಗೆ ಸಂದಾಯವಾಗುತ್ತಿದ್ದ ಅಮೂಲ್ಯ ಕೊಡುಗೆಗಳು. ಅವಳ ಹುಟ್ಟಿನಿಂದ ನನ್ನ ಹುಟ್ಟಿನವರೆಗೂ ಮೆಟ್ಟಿನ ಸಂಗವಿರಲಿಲ್ಲ…. ಅಜ್ಜಿ ಮೃತಳಾದ ಸ್ವಲ್ಪ ದಿನಗಳಲ್ಲಿಯೇ ಮಕ್ಕಳಿಗೆ ಬೇಯಿಸಿ ಹಾಕುವವರಿಲ್ಲ ಎಂಬ ನೆಪ ಮುಂದೊಡ್ಡಿ ನಮ್ಮಜ್ಜ ಮತ್ತೊಬ್ಬಳನ್ನು ಮದುವೆ ಮಾಡಿಕೊಂಡು ಬಂದನಂತೆ ಅಷ್ಟರಲ್ಲಿಯೇ ನಮ್ಮ ಪಿತಾಮಹ ಅವನ ಪಿತಾಮಹನ ಚಿತಾವಣೆಯಿಂದ ಬಕ್ಕನ ಹೊಲದಲ್ಲಿ ಬಹಿರ್ದೆಸೆಗೆಂದು ಹೋಗುತ್ತಿದ್ದ ಅವ್ವನನ್ನು ತಡೆದು ʼಮುಟ್ಟಿಕೊಂಡೆ ಮುಟ್ಟಿಕೊಂಡೆʼ ಎಂದು ಮೂರು ಬಾರಿ ಕೂಗಿ ಕೈಹಿಡಿದನಂತೆ. ಹಟ್ಟಿಯಿಂದ ಹೊರಗೆ ಒಂಟಿಯಾಗಿ ಬರುವ ಬರುವ ಮೈನೆರೆದ ಹೆಣ್ಣು ಮಕ್ಕಳನ್ನು ಯಾವುದೇ ಗಂಡಸು ಮೂರುಬಾರಿ ʼಮುಟ್ಟಿಕೊಂಡೆ ಮುಟ್ಟಿಕೊಂಡೆʼ ಎಂದರೆ ಮುಗಿಯಿತು. ಮುಟ್ಟಿಕೊಂಡವರಿಗೂ ಮುಟ್ಟಿಸಿ...